Wednesday, January 30, 2013

ನಟಸಾರ್ವಭೌಮ ಡಾ. ರಾಜ್‌ಕುಮಾರ್

 

ನಟಸಾರ್ವಭೌಮ ಡಾ||ರಾಜ್ ಕುಮಾರ್

ನಟಸಾರ್ವಭೌಮ ಡಾ. ರಾಜ್‌ಕುಮಾರ್ (ಜನನ: ಏಪ್ರಿಲ್ ೨೪, ೧೯೨೯ - ಮರಣ: ಏಪ್ರಿಲ್ ೧೨, ೨೦೦೬) ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, ೨೦೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ. ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗು ಹ೦ಪಿ ವಿಶ್ವವಿದ್ಯಾಲಯದಿ೦ದ ನಾಡೋಜ ಪದವಿಯನ್ನು ಪಡೇದಿದಾರೆ. ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ. ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು ಪುರಸ್ಕೃತರಾದವರು.

೨೦೦೦ನೇ ವರ್ಷದಲ್ಲಿ ಕುಖ್ಯಾತ ದಂತಚೋರ ವೀರಪ್ಪನ್‌ನಿಂದ ಅಪಹರಣವಾಗಿದ್ದ ರಾಜ್‌ಕುಮಾರ್ ೧೦೮ ದಿನಗಳ ನಂತರ ಬಿಡುಗಡೆಯಾಗಿದ್ದರು. ೨೦೦೬ ಏಪ್ರಿಲ್ ೧೨ರಂದು ಬೆಂಗಳೂರಿನಲ್ಲಿ, ಹೃದಯಾಘಾತದಿಂದ ಮರಣ ಹೊಂದಿದರು.

ಕನ್ನಡ ರಂಗಭೂಮಿಯ ಹೆಸರಾಂತ ಪ್ರತಿಭೆ ಸಿಂಗನಲ್ಲೂರು ಪುಟ್ಟಸ್ವಾಮಯ್ಯ ಮತ್ತು ಲಕ್ಷ್ಮಮ್ಮ ದಂಪತಿಗಳ ಹಿರಿಯ ಮಗನಾಗಿ, ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿರುವ ದೊಡ್ಡಗಾಜನೂರಿನಲ್ಲಿ ೧೯೨೯ರ ಏಪ್ರಿಲ್ ೨೪ರಂದು ರಾಜ್‌ಕುಮಾರ್ ಹುಟ್ಟಿದರು. ನಾಮಕರಣಗೊಂಡ ಹೆಸರು ಮುತ್ತುರಾಜು(ಮುತ್ತಣ್ಣ).
ಡಾ.ರಾಜ್ ಅವರಿಗೆ ವರದರಾಜ್ ಎಂಬ ಸಹೋದರರೂ, ಶಾರದಮ್ಮ ಎಂಬ ತಂಗಿಯೂ ಇದ್ದರು.
೧೯೫೩ ಜೂನ್ ೨೫ರಂದು ಪಾರ್ವತಿಯವರೊಡನೆ ಲಗ್ನವಾಯಿತು. ಪಾರ್ವತಿಯವರು ಮುಂದೆ ಪಾರ್ವತಮ್ಮ ರಾಜ್‌ಕುಮಾರ್ ಎಂದೇ ಕನ್ನಡದ ಜನತೆಗೆ ಪರಿಚಿತರಾಗಿ ಕನ್ನಡ ಚಿತ್ರರಂಗದ ಪ್ರಮುಖ ಚಿತ್ರ ನಿರ್ಮಾಪಕರೊಲ್ಲಬ್ಬರಾದರು. ವಜ್ರೇಶ್ವರಿ ಸಂಸ್ಥೆಯಡಿಯಲ್ಲಿ ಹಲವಾರು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.
ಡಾ.ರಾಜ್ ದಂಪತಿಗಳಿಗೆ ೫ ಜನ ಮಕ್ಕಳು. ಮೂರು ಜನ ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು.
ಗಂಡು ಮಕ್ಕಳಾದ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಕನ್ನಡ ಚಿತ್ರರಂಗದ ನಾಯಕ ನಟರು. ಹೆಣ್ಣು ಮಕ್ಕಳು ಪೂರ್ಣಿಮಾ ಹಾಗು ಲಕ್ಷ್ಮಿ. ಹಿರಿಯ ಅಳಿಯ ಪಾರ್ವತಮ್ಮನವರ ತಮ್ಮನಾದ ಗೋವಿಂದರಾಜು ಹಾಗು ಕಿರಿಯ ಅಳಿಯ ಚಿತ್ರನಟ ರಾಮ್‌ಕುಮಾರ್.

ಬೇಡರ ಕಣ್ಣಪ್ಪ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮುನ್ನ ಡಾ.ರಾಜ್ ಅವರ ಹೆಸರು ಮುತ್ತುರಾಜ ಎಂದಿತ್ತು. ಮುತ್ತುರಾಜನ ತಂದೆ ಸಿಂಗಾನಲ್ಲೂರು ಪುಟ್ಟಸ್ವಾಮಯ್ಯನವರು ಎಂದರೆ ೧೯೩೦-೧೯೫೦ ಕಾಲದಲ್ಲಿ ಕನ್ನಡ ರಂಗಭೂಮಿಯ ದೊಡ್ಡ ಹೆಸರು. ರೌದ್ರಪಾತ್ರಗಳಿಗೆ ಹೆಸರಾಗಿದ್ದ ಪುಟ್ಟಸ್ವಾಮಯ್ಯನವರು ಗುಬ್ಬಿ ಕಂಪನಿಯಲ್ಲಿ ಕಲಾವಿದರಾಗಿದ್ದರು. ಬಡತನದಿಂದಾಗಿ ಮುತ್ತುರಾಜ್ ವಿದ್ಯಾಭ್ಯಾಸ ನಾಲ್ಕನೆ ತರಗತಿಗೆ ನಿಂತಿತು. ಗುಬ್ಬಿ ಕಂಪನಿಯೇ ವಿಶ್ವವಿದ್ಯಾನಿಲಯವಾಯಿತು. ತಂದೆಯನ್ನು ನೆರಳಿನಂತೆ ಹಿಂಬಾಲಿಸಿದ ಮುತ್ತುರಾಜ್‌ಗೆ ಅವರಿಂದಲೇ ತರಬೇತಿಯಾಯಿತು. ನಾಟಕಗಳಲ್ಲಿ ಸಣ್ಣಪುಟ್ಟ ಪಾತ್ರ ವಹಿಸುತ್ತಿದ್ದರು.
ಡಾ.ರಾಜ್‌ಕುಮಾರ್ ಜೀವನದಲ್ಲಿ ತಂದೆ ಬೀರಿರುವ ಪ್ರಭಾವ ಅಪಾರ. ಫಾಲ್ಕೆ ಪ್ರಶಸ್ತಿ ಪ್ರಕಟವಾದಾಗ ಅವರು ಮೊದಲು ನೆನಪಿಸಿಕೊಂಡದ್ದು ತಂದೆ ಹೇಳಿದ ಮಾತುಗಳನ್ನೇ : "ಇಂತಹ ಸಾಧನೆ ನಿನ್ನಿಂದ ಸಾಧ್ಯ" ಎಂದು ಪುಟ್ಟಸ್ವಾಮಯ್ಯನವರು ಮಗನ ಭವಿಷ್ಯವನ್ನು ಅಂದೇ ನುಡಿದಿದ್ದರು. ಅದು ನಿಜವಾಯಿತು. "ನನ್ನ ತಂದೆ ರಂಗದ ಮೇಲೆ ಹುರಿಮೀಸೆ ತಿರುಗಿಸುತ್ತಾ, ಆರ್ಭಟಿಸುತ್ತಾ ರಂಗ ಪ್ರವೇಶಿಸಿದರೆಂದರೆ ಎಂತಹವರಿಗೂ ಒಂದು ಬಾರಿ ನಡುಕ ಬರುತ್ತಿತ್ತು" ಎಂದು ತಂದೆಯವರ ಅಭಿನಯವನ್ನು ಬಣ್ಣಿಸುವ ರಾಜ್‌ಕುಮಾರ್ ಅವರಿಗೆ ತಂದೆಯ ಅಭಿನಯ ಬಲು ಪ್ರಿಯ. "ನಾನೂ ಅದೇ ರೀತಿ ಮಾಡಬೇಕೆಂದು ಭಕ್ತ ಪ್ರಹ್ಲಾದ ಚಿತ್ರದಲ್ಲಿ ಹಿರಣ್ಯಕಶಿಪು ಪಾತ್ರದಲ್ಲಿ ಅವರಂತೆ ಅಭಿನಯಿಸಲು ಸಾಧ್ಯವೇ ಎಂದು ಪ್ರಯತ್ನಿಸಿದೆ; ಆದರೆ ಬರಲಿಲ್ಲ" ಎಂದು ಹೇಳಿದ್ದಾರೆ.
ಗುಬ್ಬಿ ಕಂಪನಿಯಲ್ಲಿ ಪುಟ್ಟಸ್ವಾಮಯ್ಯನವರು ಅಭಿನಯಿಸುತ್ತಿದ್ದಾಗ ಮುತ್ತುರಾಜುವಿಗೆ "ಕೃಷ್ಣಲೀಲಾ" ಎಂಬ ನಾಟಕದಲ್ಲಿ ಸಣ್ಣ ಪಾತ್ರ ದೊರಕಿತು. ಕೆಲ ದಿನಗಳ ನಂತರ ಪುಟ್ಟಸ್ವಾಮಯ್ಯನವರು ಗುಬ್ಬಿ ಕಂಪನಿ ತೊರೆದು ಎಂ.ವಿ.ಸುಬ್ಬಯ್ಯ ನಾಯ್ಡು ಅವರ ಶ್ರೀ ಸಾಹಿತ್ಯ ಸಾಮ್ರಾಜ್ಯ ನಾಟಕ ಮಂಡಲಿಗೆ ಸೇರಿದಾಗ ಅಕಸ್ಮಾತ್ತಾಗಿ ಮುತ್ತುರಾಜ್‌ಗೆ "ಅಂಬರೀಷ" ನಾಟಕದಲ್ಲಿ ಅಂಬರೀಷನ ತಮ್ಮ ರಮಾಕಾಂತನ ಪಾತ್ರ ದೊರಕಿತು. ಅನಂತರ "ಕುರುಕ್ಷೇತ್ರ" ನಾಟಕದಲ್ಲಿ ತಂದೆ ಭೀಮನ ಪಾತ್ರವಾದರೆ ಮಗ ಅರ್ಜುನನ ಪಾತ್ರ. ರಾಜ್‌ಕುಮಾರ್‌ಗೆ ಇದು ರಂಗತಾಲೀಮು.
೧೯೫೧ರಲ್ಲಿ ತಂದೆ ಪುಟ್ಟಸ್ವಾಮಯ್ಯನವರ ನಿಧನ. ಬಂದೆರಗಿದ ಅಘಾತದಿಂದ ತತ್ತರಿಸಿದ ಮುತ್ತುರಾಜ್, ಮತ್ತೆ ಗುಬ್ಬಿ ಕಂಪನಿ ಸೇರಿ "ಭೂ ಕೈಲಾಸ" ನಾಟಕದಲ್ಲಿ ಅಭಿನಯಿಸಿದರು. ಗುಬ್ಬಿ ಕಂಪನಿ ಅಲ್ಲದೆ, ಶ್ರೀ ಸಾಹಿತ್ಯ ಮಂಡಲಿ, ಶೇಷಾಚಾರ್ಯರ ಶೇಷಕಮಲ ನಾಟಕ ಮಂಡಳಿಯಲ್ಲಿಯೂ ರಾಜ್‌ಕುಮಾರ್ ಒಂದು ವರ್ಷ ಸೇವೆ ಸಲ್ಲಿಸಿದ್ದಾರೆ.

ಕೇವಲ ನಟನೆಯಲ್ಲದೆ, ಅತ್ಯುತ್ತಮ ಗಾಯಕರೂ ಆಗಿದ್ದ ರಾಜ್ ಕನ್ನಡ ಗಾನಲೋಕಕ್ಕೂ ತಮ್ಮ ಅಪಾರ ಸೇವೆ ಸಲ್ಲಿಸಿದ್ದಾರೆ. ೧೯೭೪ರಲ್ಲಿ ಬಿಡುಗಡೆಯಾದ ಸಂಪತ್ತಿಗೆ ಸವಾಲ್ ಚಿತ್ರದ ಯಾರೇ ಕೂಗಾಡಲಿ,ಊರೇ ಹೋರಾಡಲಿ (ಎಮ್ಮೆ ಹಾಡೆಂದೇ ಪ್ರಸಿಧ್ಧಿ) ಎಂಬ ಹಾಡಿನಿಂದ ಅವರು ಪೂರ್ಣ ಪ್ರಮಾಣದ ಗಾಯಕರಾಗಿ ಹೊರ ಹೊಮ್ಮಿದರು. ಇದಕ್ಕೂ ಮುಂಚೆ ೧೯೫೬ರಲ್ಲೇ ಓಹಿಲೇಶ್ವರ ಚಿತ್ರದಲ್ಲಿ "ಶರಣು ಶಂಭೋ" ಎಂಬು ಗೀತೆಯೊಂದನ್ನು ಹಾಗು ಮಹಿಷಾಸುರ ಮರ್ಧಿನಿ ಚಿತ್ರದಲ್ಲಿ ಎಸ್.ಜಾನಕಿಯವರೊಡನೆ "ತುಂಬಿತು ಮನವ ತಂದಿತು ಸುಖವ" ಎಂಬ ಯುಗಳ ಗೀತೆಯನ್ನು ಹಾಡಿದ್ದರು. ಈ ಮೂರು ಚಿತ್ರಗಳು ಜಿ.ಕೆ.ವೆಂಕಟೇಶ್ ಅವರ ಸಂಗೀತ ನಿರ್ದೇಶನವನ್ನು ಹೊಂದಿದ್ದವು. ಜಿ.ಕೆ.ವೆಂಕಟೇಶ್ ಹಾಗು ಉಪೇಂದ್ರಕುಮಾರ್ ಸಂಗೀತದಲ್ಲಿ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.
೧೯೬೨ರಲ್ಲಿ, ದೇವಸುಂದರಿ ಚಿತ್ರದಲ್ಲಿ ಹಾಸ್ಯರತ್ನ ನರಸಿಂಹರಾಜು ಅವರ ಪಾತ್ರಕ್ಕೆ ಯುಗಳ ಗೀತೆಯೊಂದನ್ನೂ ಹಾಡಿದ್ದಾರೆ. ಡಾ.ರಾಜ್ ಅವರು ಬೇರೊಬ್ಬರ ಅಭಿನಯಕ್ಕೆ ಹಿನ್ನೆಲೆಗಾಯನ ಮಾಡಿದ ಮೊದಲ ಚಿತ್ರಗೀತೆಯಿದು.
೧೯೬೪ರಲ್ಲಿ, ನವಕೋಟಿನಾರಾಯಣ (ಭಕ್ತ ಪುರಂದರದಾಸ) ಚಲನಚಿತ್ರದಲ್ಲಿ ಕೆಲವು ಕೀರ್ತನೆಗಳನ್ನು ಹಾಡಿದ್ದಾರೆ.
ಜೀವನ ಚೈತ್ರ ಚಿತ್ರದಲ್ಲಿನ ನಾದಮಯ ಈ ಲೋಕವೆಲ್ಲಾ ಹಾಡಿನ ಗಾಯನಕ್ಕೆ ರಾಷ್ಟ್ರಪ್ರಶಸ್ತಿಯನ್ನು ಪಡೆದರು.
೨೦೦೩ರಲ್ಲಿ ಬಿಡುಗಡೆಯಾದ ಅಭಿ ಚಿತ್ರದ "ವಿಧಿ ಬರಹ ಎಂಥ ಘೋರ" ಹಾಗು ಅದೇ ವರ್ಷದ ಚಿಗುರಿದ ಕನಸು ಚಿತ್ರದ "ಬಂಧುವೇ ಓ ಬಂಧುವೇ" ಇವರು ಹಾಡಿದ ಇತ್ತೀಚಿನ ಚಿತ್ರಗೀತೆಗಳಾಗಿರುತ್ತವೆ. ಚಿತ್ರಗೀತೆಗಳಷ್ಟೇ ಅಲ್ಲದೆ ಹಲವಾರು ಭಕ್ತಿಗೀತೆಗಳನ್ನು ಹಾಡಿರುವರು. ಕನ್ನಡವೇ ಸತ್ಯ, ಅನುರಾಗ, ಮಂಕುತಿಮ್ಮನ ಕಗ್ಗ - ರಾಜ್ ಕಂಠದಲ್ಲಿ ಮೂಡಿ ಬಂದ ಭಾವಗೀತೆ ಸಂಕಲನಗಳು.
ಹುಟ್ಟಿದ್ರೆ ಕನ್ನಡನಾಡ್ನಲ್ ಹುಟ್ಟಬೇಕು, ಮೆಟ್ಟಿದರೆ, ಕನ್ನಡ ಮಣ್ಣನು ಮೆಟ್ಟಬೇಕು ಗೀತೆಯನ್ನು ಸಾಮಾನ್ಯವಾಗಿ ಹೋದೆಡೆಯಲ್ಲೆಲ್ಲಾ ಹಾಡುತ್ತಿದ್ದರು. ತಮ್ಮ 'ಫಾಲ್ಕೆ ಪುರಸ್ಕಾರ', ವನ್ನು ದೆಹಲಿಯಲ್ಲಿ ಪಡೆದ ಬಳಿಕ, ಮುಂಬೈ ಗೆ ಭೇಟಿಕೊಟ್ಟಾಗ, 'ಕರ್ನಾಟಕ ಸಂಘ' ದ ರಂಗಮಂಚದಮೇಲೆ, ಮೇಲಿನ ಗೀತೆಯನ್ನು ಅವರ ಮಕ್ಕಳ ಸಮೇತ ಕುಣಿದು-ಕುಪ್ಪಳಿಸಿ ಹಾಡಿದ ಸಡಗರ ಇನ್ನೂ ಮುಂಬೈನಗರದ, ಕನ್ನಡ ರಸಿಕರ ಮನದಲ್ಲಿ ಹಸಿರಾಗಿ ಉಳಿದಿದೆ.
ರಾಷ್ಟ್ರಕವಿ ಕುವೆಂಪು ರಚಿಸಿದ 'ಕನ್ನಡವೇ ಸತ್ಯ' ಹಾಡನ್ನು ಡಾ.ರಾಜಕುಮಾರ್‌ ಭಾವಗೀತೆಯ ಮೇರು ಕಲಾವಿದ ಡಾ. ಸಿ.ಅಶ್ವತ್ಥ್‌ ಅವರ ಸಂಗೀತ ನಿರ್ದೇಶನದಲ್ಲಿ ಹಾಡಿದ್ದಾರೆ. ಇದು ಮೈಸೂರು ಅನಂತಸ್ವಾಮಿಯವರ ಆವೃತ್ತಿಗಿಂತಲೂ ಭಾರೀ ಜನಪ್ರಿಯತೆ ಗಳಿಸಿತು.

ಕನ್ನಡಪರ ಚಳುವಳಿಗಳಲ್ಲಿ ಡಾ.ರಾಜ್


ಗೋಕಾಕ್ ಚಳುವಳಿಯಲ್ಲಿ ಡಾ.ರಾಜ್
ಗೋಕಾಕ್ ವರದಿಯು ಕನ್ನಡವನ್ನು ಪ್ರಾಥಮಿಕ ಶಿಕ್ಷಣದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವುದು, ಹಾಗು ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕನ್ನಡ ಭಾಷೆಗೆ ಕೊಡುವುದರ ಬಗ್ಗೆ ಸಿದ್ಧವಾಗಿತ್ತು. ಆದರೆ, ಈ ವರದಿಯು ಜಾರಿಗೆ ಬಂದಿರಲಿಲ್ಲ. ೧೯೮೧ರಲ್ಲಿ, ಪಾಟೀಲ ಪುಟ್ಟಪ್ಪ, ಚಂದ್ರಶೇಖರ ಪಾಟೀಲ್ ಮುಂತಾದ ಸಾಹಿತಿಗಳು, ಕನ್ನಡ ವಿದ್ಯಾರ್ಥಿಗಳು, ಹಲವು ಸಂಘಸಂಸ್ಥೆಗಳು ಗೋಕಾಕ್ ವರದಿಯನ್ನು ಜಾರಿಗೊಳಿಸುವಂತೆ ಚಳುವಳಿಯನ್ನು ಪ್ರಾರಂಭಮಾಡಿದರು. ಇದೇ ಚಳುವುಳಿಯು ಗೋಕಾಕ್ ಚಳುವಳಿ ಎಂದೇ ಹೆಸರಾಯಿತು.
ಚಳುವಳಿಯು ಪ್ರಾರಂಭಗೊಂಡು ಹಲವಾರು ದಿನಗಳು ಕಳೆದರೂ, ಜನಸಾಮಾನ್ಯರಿಂದ ಉತ್ಸಾಹದ ಪ್ರತಿಕ್ರಿಯೆ ಕಂಡು ಬರಲಿಲ್ಲ. ಈ ಸಮಯದಲ್ಲಿ, ಡಾ. ರಾಜ್ ಅವರನ್ನು ಚಳುವಳಿಗೆ ಆಹ್ವಾನಿಸಿ, ಚಳುವಳಿಯ ಬಲವರ್ಧನೆ ಮಾಡಬೇಕೆಂದು ಕೋರಲಾಯಿತು.
ಡಾ. ರಾಜ್ ನೇತೃತ್ವದಲ್ಲಿ ಕನ್ನಡ ಚಿತ್ರರಂಗ, ಗೋಕಾಕ್ ಚಳುವಳಿಗೆ ಸಂಪೂರ್ಣ ಸಹಕಾರ ನೀಡಲು ಪ್ರಕಟಿಸಿ, ರಾಜ್ಯಾದ್ಯಂತ ಪ್ರವಾಸ ಕೈಗೊಂಡಿತು. ಹಲವಾರು ಸಭೆಗಳು, ಭಾಷಣಗಳು ಕರ್ನಾಟಕದ ಪ್ರಮುಖ ನಗರಗಳಲ್ಲಿ ಜರುಗಿದವು. ಕರ್ನಾಟಕದ ಜನತೆ ಚಳುವಳಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಉತ್ಸಾಹದಿಂದ ಪ್ರತಿಕ್ರಿಯಿಸಿದರು, ಭಾಗವಹಿಸಿದರು. ಕನ್ನಡದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು, ಅಭಿಮಾನ ಬೆಳೆಸಲು, ಕನ್ನಡ ಭಾಷೆಗೆ ಸಿಗಬೇಕಾದ ಹಕ್ಕುಗಳು,ಸೌಲಭ್ಯಗಳನ್ನು ಆಗಿನ ಕರ್ನಾಟಕ ಸರ್ಕಾರಕ್ಕೆ ಮನದಟ್ಟು ಮಾಡಿಕೊಡಲು, ಡಾ.ರಾಜ್ ಅವರ ಭಾಷಣಗಳು ಹಾಗು ಚಳುವಳಿಯ ನೇತೃತ್ವ ಸಹಾಯಕಾರಿಯಾದವು.
ಗುಂಡೂರಾವ್ ನೇತೃತ್ವದ ಆಗಿನ ಕರ್ನಾಟಕ ಸರ್ಕಾರವು ಚಳುವಳಿಯ ತೀವ್ರತೆಗೆ ಸ್ಪಂದಿಸಿ, ಗೋಕಾಕ್ ವರದಿಯನ್ನು ಜಾರಿಗೊಳಿಸಿತು.

ಪ್ರಶಸ್ತಿ ಪುರಸ್ಕಾರಗಳು, ಬಿರುದುಗಳು


ಕರ್ನಾಟಕ ರತ್ನ, ಪದ್ಮಭೂಷಣ ಡಾ. ರಾಜ್‌ಕುಮಾರ್
  • ಪದ್ಮಭೂಷಣ (ಭಾರತ ಸರ್ಕಾರದಿಂದ)
  • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ (೧೯೯೫ರಲ್ಲಿ ಭಾರತ ಸರ್ಕಾರದಿಂದ)
  • ಕರ್ನಾಟಕ ರತ್ನ (ಕರ್ನಾಟಕ ಸರ್ಕಾರ)
  • ರಾಷ್ಟ್ರಪ್ರಶಸ್ತಿ (ಜೀವನ ಚೈತ್ರ ಚಿತ್ರದಲ್ಲಿನ 'ನಾದಮಯ ಈ ಲೋಕವೆಲ್ಲಾ' ಹಾಡಿನ ಗಾಯನಕ್ಕೆ)
  • ಅತ್ಯುತ್ತಮ ನಟ ಫಿಲ್ಮ್‌ಫೇರ್ ಪ್ರಶಸ್ತಿ (ಹತ್ತು ಬಾರಿ)
  • ಅತ್ಯುತ್ತಮ ನಟ ರಾಜ್ಯಪ್ರಶಸ್ತಿ (ಒಂಬತ್ತು ಬಾರಿ)
  • ನಟಸಾರ್ವಭೌಮ (೧೦೦ನೆಯ ಚಿತ್ರದ ಸಂದರ್ಭದಲ್ಲಿ)
  • ಗಾನಗಂಧರ್ವ (ಅಭಿಮಾನಿ ಸಂಘಗಳಿಂದ)
  • ವರನಟ (ಪತ್ರಕರ್ತರು, ಅಭಿಮಾನಿಗಳು)
  • ಗೌರವ ಡಾಕ್ಟರೇಟ್(ಮೈಸೂರು ವಿಶ್ವವಿದ್ಯಾಲಯ)
  • ಅಣ್ಣಾವ್ರು (ಅಭಿಮಾನಿಗಳಿಂದ)
  • ರಸಿಕರ ರಾಜ (ಅಭಿಮಾನಿಗಳಿಂದ)
  • ಕೆಂಟಕಿ ಕರ್ನಲ್ (ಅಮೆರಿಕದ ಕೆಂಟಕಿ ರಾಜ್ಯದ ಗವರ್ನರ್ ೧೯೮೫ರಲ್ಲಿ ಬೆಂಗಳೂರಲ್ಲಿ ನೀಡಿದರು)
  • ಕನ್ನಡದ ಕಣ್ಮಣಿ (ಅಭಿಮಾನಿಗಳಿಂದ)
  • ಮೇರು ನಟ (ಅಭಿಮಾನಿಗಳಿಂದ)
  • ನಾಡೋಜ ಪ್ರಶಸ್ತಿ (ಕರ್ನಾಟಕ ಸರ್ಕಾರ)
  • ಗುಬ್ಬಿ ವೀರಣ್ಣ ಪ್ರಶಸ್ತಿ (ಕರ್ನಾಟಕ ಸರ್ಕಾರ)
  • ಕಲಾ ಕೌಸ್ತುಭ (ವೃತ್ತಿ ರಂಗಭೂಮಿಗೆ ಸಲ್ಲಿಸಿದ ಸೇವೆಗೆ, ಕರ್ನಾಟಕ ಸರ್ಕಾರದಿಂದ)
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ, ಯಶವಂತಪುರ ಮೇಲ್ಸೇತುವೆಯಿಂದ ಪ್ರಸನ್ನ ಚಿತ್ರಮಂದಿರದವರೆಗೆ ರಾಜಾಜಿನಗರದ ಮೂಲಕ ಹಾದುಹೋಗುವ ಮುಖ್ಯರಸ್ತೆಗೆ ಡಾ. ರಾಜ್‌ಕುಮಾರ್ ರಸ್ತೆ ಎಂದು ಹೆಸರಿಸಲಾಗಿದೆ.

ಪಿ.ಹೆಚ್.ಡಿ ವಸ್ತುವಾಗಿ ಡಾ.ರಾಜ್ ಸಾಂಸ್ಕೃತಿಕ ಕೊಡುಗೆಗಳು

ಬೆಂಗಳೂರಿನ ಬಸವನಗುಡಿಯಲ್ಲಿರುವ ವಿಜಯ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾದ ಡಿ.ಗುರುಮೂರ್ತಿ ಹಾರೋಹಳ್ಳಿ ಅವರು "ಕನ್ನಡ ರಂಗಭೂಮಿ ಮತ್ತು ಸಿನೆಮಾಕ್ಕೆ ಡಾ.ರಾಜ್ ಕೊಡುಗೆ" ಕುರಿತ ಸಂಶೋಧನಾತ್ಮಕ ಪ್ರಬಂಧ ಮಂಡಿಸಿ, ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಂಶೋಧನೆಯ ಸಮಯದಲ್ಲಿ, ಡಾ.ರಾಜ್ ಅವರನ್ನು ಹಲವಾರು ಬಾರಿ ಸಂದರ್ಶಿಸಿದ್ದಾರೆ. ೧೯೯೭ರಲ್ಲಿ ಪ್ರಾರಂಭಿಸಿದ ಸಂಶೋಧನೆಯನ್ನು ನಾಲ್ಕುವರ್ಷಗಳ ಕಾಲ ಡಾ.ಮಳಲಿ ವಸಂತಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಸಿದ ಗುರುಮೂರ್ತಿ ೨೦೦೧ರಲ್ಲಿ ಪಿ.ಹೆಚ್.ಡಿ ಪದವಿ ಪಡೆದರು.

ನಿಧನ


ಮಾಧ್ಯಮಗಳಿಂದ "ಅಂತಿಮ ನಮನ, ಅಣ್ಣಾವ್ರೆ"
ಅಂತಿಮ ದಿನಗಳಲ್ಲಿ ಮಂಡಿನೋವು ಹಾಗು ಎದೆನೋವಿನಿಂದ ಬಳಲಿದ ಡಾ.ರಾಜ್, ೧೨ ಏಪ್ರಿಲ್, ೨೦೦೬ ಬುಧವಾರದಂದು ಮಧ್ಯಾಹ್ನ ೧:೪೫ರ ಸುಮಾರಿಗೆ, ಬೆಂಗಳೂರಿನಲ್ಲಿ ತಮ್ಮ ಕೊನೆಯುಸಿರೆಳದರು.
ಕನ್ನಡ ಚಿತ್ರರಂಗದ ದಂತಕಥೆಯಾಗಿದ್ದ ಡಾ.ರಾಜ್ ಅವರ ಅಗಲಿಕೆಯಿಂದ, ಒಂದು ಸುವರ್ಣ ಯುಗದ ಅಂತ್ಯವಾದಂತಾಯಿತು. ಡಾ.ರಾಜ್ ಅವರ ಸ್ವ-ಇಚ್ಛೆಯಂತೆ, ಮರಣೋತ್ತರವಾಗಿ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಯಿತು. ಮೃತರ ಪಾರ್ಥಿವ ಶರೀರವನ್ನು ಅಭಿಮಾನಿಗಳ, ಬಂಧುಮಿತ್ರರ ದರ್ಶನಕ್ಕಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಡಲಾಗಿತ್ತು. ಅಪಾರ ಸಂಖ್ಯಯ ಜನಸ್ತೋಮ ಅಂತಿಮದರ್ಶನದಲ್ಲಿ ಪಾಲ್ಗೊಂಡಿತ್ತು.
೧೩ ಏಪ್ರಿಲ್ ೨೦೦೬ರಂದು, ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ಕಂಠೀರವ ಸ್ಟುಡಿಯೊ ಆವರಣದಲ್ಲಿ ಡಾ.ರಾಜ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರವು ನಡೆಯಿತು. ಇವೆರಡು ದಿನ (ಏಪ್ರಿಲ್ ೧೨ ಮತ್ತು ೧೩), ಬೆಂಗಳೂರಿನಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ಉಂಟಾಗಿತ್ತು.

ಡಾ. ರಾಜ್ ಅಭಿನಯದ ಚಲನಚಿತ್ರಗಳ ಸಂಪೂರ್ಣ ಪಟ್ಟಿ (ಫಿಲ್ಮೋಗ್ರಾಫಿ)

 

No
ವರ್ಷ
ಚಿತ್ರ
1
1954
ಬೇಡರ ಕಣ್ಣಪ್ಪ
2
1955
ಸೋದರಿ
3
1956
ಭಕ್ತ ವಿಜಯ
4
1956
ಹರಿಭಕ್ತ
5
1956
ಓಹಿಲೇಶ್ವರ
6
1957
ಸತಿ ನಳಾಯಿನಿ
7
1957
ರಾಯರ ಸೊಸೆ
8
1958
ಭೂಕೈಲಾಸ
9
1958
ಕೃಷ್ಣಗಾರುಡಿ
10
1958
ಅಣ್ಣ ತಂಗಿ
11
1959
ಜಗಜ್ಯೋತಿ ಬಸವೇಶ್ವರ
12
1959
ಧರ್ಮ ವಿಜಯ
13
1959
ಮಹಿಷಾಸುರ ಮರ್ಧಿನಿ
14
1959
ಅಬ್ಬಾ ಆ ಹುಡುಗಿ
15
1960
ರಣಧೀರ ಕಂಠೀರವ
16
1960
ರಾಣಿ ಹೊನ್ನಮ್ಮ
17
1960
ಆಶಾಸುಂದರಿ
18
1960
ದಶಾವತಾರ
19
1960
ಭಕ್ತ ಕನಕದಾಸ
20
1961
ಶ್ರೀಶೈಲ ಮಹಾತ್ಮೆ
21
1961
ಕಿತ್ತೂರು ಚೆನ್ನಮ್ಮ
22
1961
ಕಣ್ತೆರೆದು ನೋಡು
23
1961
ಕೈವಾರ ಮಹಾತ್ಮೆ
24
1961
ಭಕ್ತ ಚೇತ
25
1961
ನಾಗಾರ್ಜುನ
26
1962
ಗಾಳಿಗೋಪುರ
27
1962
ಭೂದಾನ
28
1962
ಸ್ವರ್ಣಗೌರಿ
29
1962
ದೇವಸುಂದರಿ
30
1962
ಕರುಣೆಯೇ ಕುಟುಂಬದ ಕಣ್ಣು
31
1962
ಮಹಾತ್ಮ ಕಬೀರ್
32
1962
ವಿಧಿವಿಲಾಸ
33
1962
ತೇಜಸ್ವಿನಿ
34
1963
ವಾಲ್ಮೀಕಿ
35
1963
ನಂದಾದೀಪ
36
1963
ಸಾಕು ಮಗಳು
37
1963
ಕನ್ಯಾರತ್ನ
38
1963
ಗೌರಿ
39
1963
ಜೀವನ ತರಂಗ
40
1963
ಮಲ್ಲಿ ಮದುವೆ
41
1963
ಕುಲವಧು
42
1963
ಕಲಿತರೂ ಹೆಣ್ಣೇ
43
1963
ವೀರಕೇಸರಿ
44
1963
ಮನ ಮೆಚ್ಚಿದ ಮಡದಿ
45
1963
ಸತಿ ಶಕ್ತಿ
46
1963
ಚಂದ್ರಕುಮಾರ
47
1963
ಸಂತ ತುಕಾರಾಮ
48
1963
ಶ್ರೀರಾಮಾಂಜನೇಯ ಯುದ್ಧ
49
1964
ನವಕೋಟಿ ನಾರಾಯಣ
50
1964
ಚಂದವಳ್ಳಿಯ ತೋಟ
51
1964
ಶಿವರಾತ್ರಿ ಮಹಾತ್ಮೆ
52
1964
ಅನ್ನಪೂರ್ಣ
53
1964
ತುಂಬಿದ ಕೊಡ
54
1965
ಶಿವಗಂಗೆ ಮಹಾತ್ಮೆ
55
1965
56
1965
57
1965
58
1965
59
1965
60
1965
61
1965
62
1965
63
1965
64
1965
65
1966
66
1966
ಸತಿ ಸಾವಿತ್ರಿ
67
1966
ಮದುವೆ ಮಾಡಿ ನೋಡು
68
1966
ಪತಿವ್ರತಾ
69
1966
70
1966
71
1966
72
1966
73
1966
74
1966
75
1966
76
1967
77
1967
78
1967
79
1967
80
1967
81
1967
82
1967
83
1967
84
1967
85
1967
86
1967
87
1967
88
1968
89
1968
90
1968
91
1968
92
1968
93
1968
94
1968
95
1968
96
1968
97
1968
98
1968
99
1968
100
1968
101
1968
102
1968
103
1968
104
1969
105
1969
106
1969
107
1969
108
1969
109
1969
110
1969
111
1969
112
1969
113
1969
114
1970
115
1970
116
-
117
1970
118
1970
119
1970
120
1970
121
1970
122
1970
123
1970
124
1970
125
1970
126
1971
127
1971
128
1971
129
1971
130
1971
131
1971
132
1971
133
1971
134
1971
135
1971
136
1972
137
1972
138
1972
139
1972
140
1972
141
1972
142
1972
143
1972
144
1973
145
1973
146
1973
147
1973
148
1973
149
1973
150
1974
151
1974
152
1974
ಮೂರೂವರೆ ವಜ್ರಗಳು
153
1974
154
1974
155
1975
156
1975
157
1975
158
1976
159
1976
160
1976
161
1976
162
1976
163
1977
164
1977
165
1977
166
1977
167
1977
168
1978
169
1978
170
1979
171
1979
172
1980
173
1980
174
1981
175
1981
176
1981
177
-
178
1981
179
1982
180
1982
181
1982
182
1983
183
1983
184
1983
185
1983
186
1984
187
1984
188
1984
189
1984
190
1985
191
1985
192
1985
193
1986
194
1986
195
1986
196
1987
ಅನುರಾಗ ಅರಳಿತು
197
1987
198
-
ಒಂದು ಮುತ್ತಿನ ಕಥೆ
199
1988
200
1989
ದೇವತಾ ಮನುಷ್ಯ
201
1992
ಪರಶುರಾಮ್
202
1993
ಜೀವನ ಚೈತ್ರ
203
1994
ಆಕಸ್ಮಿಕ
204
2000
ಒಡಹುಟ್ಟಿದವರು
205
ಶಬ್ದವೇಧಿ

 

No comments:

Post a Comment